



ಮಂಗಳೂರು: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ (NRLM), ಸಂಜೀವಿನಿ -ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಸ್ವಚ್ಛ ಭಾರತ್ ಮಿಷನ್ (ಗ್ರಾ ), ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಇವರ ಸಹಕಾರದಲ್ಲಿ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟದ ಮಹಿಳೆಯರಿಗೆ 5 ದಿನಗಳ ಘನತ್ಯಾಜ್ಯ ನಿರ್ವಹಣೆ ತರಬೇತಿಯ ಉದ್ಘಾಟನೆ ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ ಇಲ್ಲಿ ನಡೆಯಿತು. ಡಾ. ಕುಮಾರ್, IAS, ಮುಖ್ಯ ಕಾರ್ಯನಿರ್ವಹನಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇವರು ಕಾರ್ಯಕ್ರಮ ಉದ್ಘಾಟಿಸಿದರು. MGIRED ಸಂಸ್ಥೆಯ ಭೋದಕರಾದ ಶ್ರೀ ರವಿ, NRLM ಯೋಜನೆಯ ಜಿಲ್ಲಾ ವ್ಯವಸ್ತಾಪಕರಾದ ಶ್ರೀ ಹರಿಪ್ರಸಾದ್, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ರಮೇಶ್ ವೇದಿಕೆಯಲ್ಲಿ ಇದ್ದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪಂಚಾಯತ್ ನ 30 ಮಹಿಳೆಯರು ಈ ತರಬೇತಿಯಲ್ಲಿ 5 ದಿನ ಘನ ತ್ಯಾಜ್ಯ ವಿಷಯದ ಕುರಿತಾಗಿ ತರಬೇತಿ ಪಡೆಯಲ್ಲಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.