



ಮಂಗಳೂರು-ಕಾರ್ಕಳ: ಕಾರ್ಕಳ-ಮಂಗಳೂರು ದಾರಿಯಲ್ಲಿ ಸರಕಾರಿ ಬಸ್ಸು ಓಡಾಟ ಆರಂಭಿಸಿದೆ. ಈ ಮೂಲಕ ಇಲ್ಲಿನ ಜನರ, ವಿದ್ಯಾರ್ಥಿಗಳ ಬಹು ವರ್ಷಗಳ ಕನಸಾಗಿದೆ.. ಗ್ಯಾರಂಟಿ ಯೋಜನೆ ಬಂದ ಮೇಲಂತೂ ಸರಕಾರಿ ಬಸ್ಸನ್ನು ಈ ದಾರಿಯಲ್ಲಿ ಬಿಡಲೇಬೇಕು ಎನ್ನುವ ಆಗ್ರಹ ಜಾಸ್ತಿಯಾಗಿತ್ತು. ಈಗ ಸರಕಾರಿ ಬಸ್ಸಿನ ಕನಸು ಈಡೇರಿದೆ. ಡಿ.12 ಗುರುವಾರದಿಂದ ಕಾರ್ಕಳ-ಮೂಡುಬಿದಿರೆ ದಾರಿಯಲ್ಲಿ ಸರಕಾರಿ ಬಸ್ಸು ಸಂಚಾರ ಆರಂಭಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳು ಓಡಾಟ ಶುರು ಮಾಡಲಿ, ಖಾಸಗಿ ಬಸ್ ಜೊತೆಗೆ ಜನತೆಗೆ ಸರಕಾರಿ ಬಸ್ ಗಳು ಕೂಡ ಬೇಕೇ ಎಂದು ಜನತೆ ತಿಳಿಸಿದ್ದಾರೆ.
ಬಸ್ ವೇಳಾಪಟ್ಟಿ
ಮಂಗಳೂರಿನಿಂದ ಕಾರ್ಕಳಕ್ಕೆ ಬೆಳಿಗ್ಗೆ 6.45,8.30,10.30,12.15,3.15,4.00,5.45 ಕ್ಕೆ ಮಂಗಳೂರು ಬಿಜೈ ಸರಕಾರಿ ಬಸ್ ನಿಲ್ದಾಣದಿಂದ ಹೊರಡಿಲಿದೆ. ಕಾರ್ಕಳ ಮುಖ್ಯ ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 6.45 8.30 ,10.30, 12.15, 2.15, 4.00, 5.45. ಕ್ಕೆ ಮಂಗಳೂರಿನತ್ತ ಹೊರಡಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.