logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ವಿಮಾನ ನಿಲ್ದಾಣದ ವಿರುದ್ಧ ಭಾರೀ ಪ್ರತಿಭಟನೆ

ಟ್ರೆಂಡಿಂಗ್
share whatsappshare facebookshare telegram
8 Aug 2026
post image

ಮಂಗಳೂರು: ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ಥಳೀಯರಿಗೆ ಹಲವು ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ಬಜ್ಪೆ ಪಟ್ಟಣ ಪಂಚಾಯತ್‌ನ ಎಲ್ಲಾ 19 ಕೌನ್ಸಿಲರ್‌ಗಳು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ವಿಮಾನ ನಿಲ್ದಾಣ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕೌನ್ಸಿಲರ್‌ಗಳು ಆಕ್ರೋಶ ವ್ಯಕ್ತಪಡಿಸಿದರು.

ಬಜ್ಪೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದು, ಹಲವು ಕಡೆ ತಡೆಗೋಡೆಗಳು ಕುಸಿದಿವೆ. ಇದರಿಂದ ಮಳೆಗಾಲದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗದೆ ಸಮಸ್ಯೆಗಳು ಉಂಟಾಗುತ್ತಿವೆ. ಇದರ ಪರಿಣಾಮ ಮರವೂರು ಹಾಗೂ ಕೆಂಜಾರು ಭಾಗಗಳಲ್ಲಿಯೂ ತೊಂದರೆ ಎದುರಾಗುತ್ತಿದೆ ಎಂದು ಕೌನ್ಸಿಲರ್‌ಗಳು ಆರೋಪಿಸಿದರು.

ಈ ಸಮಸ್ಯೆಗಳ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ದೂರಿದರು.

ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಸ್ಥಳೀಯ ನಾಗರಿಕರು ಹಾಗೂ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಮತ್ತಷ್ಟು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕೌನ್ಸಿಲರ್‌ಗಳು ಎಚ್ಚರಿಕೆ ನೀಡಿದರು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.