logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಂಗಳೂರು: ದಸರಾ ದರ್ಶಿನಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ: ಮಂಗಳೂರು ಸುತ್ತಮುತ್ತಲಿನ ದೇಗುಲಗಳ ದರ್ಶನ

ಟ್ರೆಂಡಿಂಗ್
share whatsappshare facebookshare telegram
26 Sept 2022
post image

ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.

ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8-9 ಗಂಟೆಗೆ ಹೊರಟು ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಭಗವತಿ ದೇವಸ್ಥಾನ ಹಾಗೂ ಬೀಚ್, ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವಾ ಮಾರಿಯಮ್ಮ ದೇವಸ್ಥಾನ ಹಾಗೂ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವದುರ್ಗ ದರ್ಶನ ಮೂಲಕ ಮಂಗಳೂರು ಬಸ್ ನಿಲ್ದಾಣಕ್ಕೆ ವಾಪಸ್ ಆಗುವ ಈ ಸೇವೆಯ ಮೂರು ಬಸ್‍ಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ವಿಶೇಷವಾದ ಹಾಗೂ ವಿನೂತನವಾದ ಮಂಗಳೂರು ದಸರಾ ದರ್ಶನ  ಯಾತ್ರೆಯ ಬಸ್ ಆರಂಭಿಸಿ, ಉತ್ತಮ ಪ್ರಯತ್ನ ಮಾಡಿದ್ದಾರೆ, ದಸರಾ ದರ್ಶನ ಮೂರು ಬಸ್ಸುಗಳು ಯಾತ್ರಿಕರನ್ನು ಮಂಗಳೂರಿಗೆ ಹತ್ತಿರದಲ್ಲಿರುವ ದೇವಿಯ ಪ್ರಮುಖ ದೇವಸ್ಥಾನಗಳಿಗೆ ಕರೆದೊಯ್ಯಲಿವೆ, ಬಸ್ಸಿನಲ್ಲಿರುವ ಯಾತ್ರಿಕರು ಹಿರಿಯ ವಯಸ್ಸಿನವರು ಅವರು ಪೊಳಲಿ, ಕಟೀಲು, ಮಂಗಳದೇವಿ, ಬಪ್ಪನಾಡು ಹೀಗೆ ಎಲ್ಲಾ ದೇವಸ್ಥಾನಗಳಲ್ಲಿ ಮುಕ್ತವಾಗಿ ದರ್ಶನ ಮಾಡಬಹುದಾಗಿದೆ, ಅದಕ್ಕಾಗಿ ಇತರರನ್ನು ಅವಲಂಭಿಸುವಂತಿಲ್ಲ ಎಂದರು. 

9 ದಿನಗಳ ಈ ಒಂದು ಪ್ರಯತ್ನ ನಿಜಕ್ಕೂ ಮಂಗಳೂರಿನ ಜನತೆಗೆ ಸಂತೋಷ ತರಲಿದೆ, ಈ ದಸರಾ ದರ್ಶನದಲ್ಲಿ ಮಂಗಳೂರಿನ ಸಾರ್ವಜನಿಕರು, ಹಿರಿಯರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕು. ದೇವಸ್ಥಾನದಲ್ಲಿ ಬಸ್ಸನ್ನು ಹತ್ತಿದ ನಂತರ ಪ್ರಯಾಣಿಕರೆಲ್ಲರೂ ಇರುವ ಬಗ್ಗೆ ಕಂಡಕ್ಟರ್ ಖಾತ್ರಿ ಪಡಿಸಿಕೊಳ್ಳಬೇಕು. ಸೆ.26 ರಿಂದ ಅ.5ರ ವರೆಗೆ ನಡೆಯಲಿರುವ ಈ ಪ್ಯಾಕೇಜ್‍ಗೆ ಹಿರಿಯರ ದರ 300ರೂ. ಹಾಗೂ ಮಕ್ಕಳಿಗೆ 200ರೂ. ಗಳನ್ನು ನಿಗದಿ ಮಾಡಲಾಗಿದೆ. ಪ್ರಯಾಣಿಕರು ಹೆಚ್ಚಾದಲ್ಲಿ ಹೆಚ್ಚುವರಿಯಾಗಿ ಪುನಃ 2 ಬಸ್ಸನ್ನು ನಿಯೋಜಿಸಲಾಗುವುದು ಎಂದು ಕೆ.ಎಸ್.ಆರ್.ಟಿ ಸಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮೂರು ಬಸ್ಸುಗಳ 90ಕ್ಕೂ ಹೆಚ್ಚು ಪ್ರಯಾಣಿಕರು, ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗದ ವಿಭಾಗಿಯ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ, ಡಿಟಿಓ ಮರಿಗೌಡ, ಎ.ಟಿ.ಓ ನಿರ್ಮಲಾ, ಡಿಪ್ಪೋ ಮ್ಯಾನೇಜರ್ ಲವೀನಾ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಸಿಬ್ಬಂದಿಗಳು, ಚಾಲಕರು ಹಾಗೂ ನಿರ್ವಾಹಕರು, ಭಕ್ತಾದಿಗಳು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.