logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಂಗಳೂರು: 2025ನೇ ಸಾಲಿನ ರಚನಾ ಪ್ರಶಸ್ತಿ ಪ್ರಕಟ.

ಟ್ರೆಂಡಿಂಗ್
share whatsappshare facebookshare telegram
7 Sept 2025
post image

ಮಂಗಳೂರು: 1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ. ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ.

ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು, ಅನಿವಾಸಿ ಭಾರತೀಯರು ಹಾಗೂ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರತಿಷ್ಠಿತ ರಚನಾ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ ಎಂದು ಸಪ್ತೆಂಬರ್ 5ರಂದು ಬೆಳಿಗ್ಗೆ ಪತ್ರಿಕೆಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ಬಾರಿಯಂತೆ ಈ ಬಾರಿಯೂ ಸುಮಾರು 25 ಜ್ಯೂರಿ ಸದಸ್ಯರನ್ನೊಳಗೊಂಡ ಸಮಿತಿಯು ಪರಿಶೀಲನೆ ನಡೆಸಿ ಈ ಕೆಳಗಿನ ವ್ಯಕ್ತಿಗಳನ್ನು 2025ನೇ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ:

ರಚನಾ ಉದ್ಯಮಿ - ಶ್ರೀ ಆಸ್ಟಿನ್ ರೋಚ್, ಬೆಂಗಳೂರು ರಚನಾ ವೃತ್ತಿಪರ – ಶ್ರೀ ಜಾನ್ ರಿಚರ್ಡ್ ಲೋಬೊ ಕೆ.ಎ.ಎಸ್, ಮಂಗಳೂರು ರಚನಾ ಕೃಷಿಕ - ಡಾ. ಗಾಡ್ವಿನ್ ರೊಡ್ರಿಗಸ್ ಪಿಎಚ್‌ಡಿ, ಬೆಳ್ವಾಯಿ, ಮಂಗಳೂರು ರಚನಾ ಅನಿವಾಸಿ ಉದ್ಯಮಿ - ಶ್ರೀ ಪ್ರತಾಪ್ ಮೆಂಡೋನ್ಸಾ, ದುಬಾಯ್ ರಚನಾ ಮಹಿಳಾ ಸಾಧಕಿ – ಶ್ರೀಮತಿ ಶೋಭಾ ಮೆಂಡೋನ್ಸಾ, ದುಬಾಯ್

ಪ್ರಶಸ್ತಿ ಪ್ರದಾನ ಕಾರ‍್ಯಕ್ರಮವು 2025ರ ಅಕ್ತೋಬರ್ 5 ರಂದು ಭಾನುವಾರ ಸಂಜೆ 6.00 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ಜರಗಲಿದ್ದು, ಮಂಗಳೂರಿನ ಬಿಷಪ್ ಅತೀ ಡಾ| ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಶ್ರೀ ಕೆ. ಜೆ. ಜಾರ್ಜ್, ಮಾನ್ಯ ಸಚಿವರು, ಇಂಧನ ಇಲಾಖೆ, ಕರ್ನಾಟಕ ಸರ್ಕಾರ - ಇವರು ಮುಖ್ಯ ಅತಿಥಿಯಾಗಿ ಆಗಮಿಸಲಿರುವರು.

ಶ್ರೀ ಐವನ್ ಡಿಸೋಜಾ, ವಿಧಾನ ಪರಿಷತ್ ಶಾಸಕರು, ಕರ್ನಾಟಕ ಸರ್ಕಾರ; ಯುಎಇಯ ಬುರ್ಜೀಲ್ ಹೋಲ್ಡಿಂಗ್ಸ್‌ನ ಸಮೂಹ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಜಾನ್ ಸುನಿಲ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಹಾಗೂ ಡೀನ್ ಮತ್ತು ನಿರ್ದೇಶಕಿ ಡಾ. ಸಿಂಥಿಯಾ ಮಿನೇಜಸ್ - ಇವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಜೊನ್ ಬಿ. ಮೊಂತೇರೊ – ಅಧ್ಯಕ್ಷರು, ಶ್ರೀ ವಿಜಯ್ ವಿ. ಲೋಬೊ–ಕಾರ್ಯದರ್ಶಿ, ಶ್ರೀ ನೆಲ್ಸನ್ ಮೊಂತೇರೊ – ಖಜಾಂಚಿ, ಶ್ರೀ ನವೀನ್ ಲೋಬೊ – ಉಪಾಧ್ಯಕ್ಷರು, ಶ್ರೀಮತಿ ಯುಲಾಲಿಯಾ ಡಿಸೋಜಾ – ಸಂಘಟಕರು ಹಾಜರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.