



ಮಂಗಳೂರು : ಮಂಗಳೂರಿನಲ್ಲಿ ಭಾರಿ ಮಳೆ ಸುರಿಯುತಿದ್ದು ಭಾರಿ ಮಳೆಗೆ ಮಂಗಳೂರಿನ ಪಡೀಲ್ – ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ನಡುವಿನ ರೈಲ್ವೆ ಹಳಿಗೆ ಗುರುವಾರ ಬೆಳಗ್ಗೆ ಮಣ್ಣು ಕುಸಿದಿದೆ. ಹಳಿಗೆ ಮಣ್ಣು ಕುಸಿದಿರುವ ಕಾರಣ ಗುರುವಾರ ಹಲವು ರೈಲು ಸಂಚಾರ ರದ್ದಾಗಿದೆ.
ರೈಲು ಸಂಖ್ಯೆ 06488 ಸುಬ್ರಹ್ಮಣ್ಯ ರೋಡ್ – ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 06489 ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ವಿಶೇಷ ಎಕ್ಸ್‌ಪ್ರೆಸ್ ರೈಲು ಪ್ರಯಾಣ ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.