



ಬೆಂಗಳೂರು: ದೇಶದ ಗರಿಷ್ಟ ತಾಪಮಾನ ಕಡಲ ನಗರಿ ಮಂಗಳೂರಿನಲ್ಲಿ ದಾಖಲಾಗಿದೆ. ಬುಧವಾರ ಮಂಗಳೂರಿನಲ್ಲಿ ತಾಪಮಾನ 38.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯವಾಗಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಜಾಸ್ತಿಯಾಗಿದೆ.
2010ರ ಬಳಿಕ ಮಾರ್ಚ್ ತಿಂಗಳಲ್ಲಿ ಮೊದಲ ಬಾರಿಗೆ ಗರಿಷ್ಟ ತಾಪಮಾನ ಮಂಗಳೂರಿನಲ್ಲಿ ದಾಖಲಾಗಿದೆ.
ಈ ಹಿಂದೆ 2017ರಲ್ಲಿ ಮಾರ್ಚ್ ತಿಂಗಳಲ್ಲಿ 37.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿದ್ದು ಸುಡು ಬಿಸಿಲಿನ ಮಧ್ಯೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಂಗಳೂರಿನಲ್ಲಿ ತಾಪಮಾನದಲ್ಲಿನ ಹೆಚ್ಚಳವಾಗಿರುವ ಕಾರಣ ಐಸ್ ಕ್ರೀಂ ಮತ್ತು ತಂಪು ಪಾನೀಯಗಳ ಬೇಡಿಕೆ ಹೆಚ್ಚಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.