logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: 24 ರಂದು ಫಾತಿಮಾ ರಲಿಯಾ ಅವರ ಕವನ ಸಂಕಲನ ಬಿಡುಗಡೆ

ಟ್ರೆಂಡಿಂಗ್
share whatsappshare facebookshare telegram
23 Feb 2024
post image

ಮಂಗಳೂರು: ಶನಿವಾರ 24 ರ ಸಂಜೆ‌ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಕವನ ಸಂಕಲನ ‘ಅವಳ ಕಾಲು ಸೋಲದಿರಲಿ’ ಬಿಡುಗಡೆಯಾಗಲಿದೆ.

ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಪುಸ್ತಕವನ್ನು ‘ಉಡುಗೊರೆ ಪ್ರಕಾಶನ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರಚರ ಮೂರನೇ ಕೃತಿಯಾಗಿದೆ. ಹಿಂದಿನ ಎರಡು ಕೃತಿಗಳಾದ ‘ಕಡಲು ನೋಡಲು ಹೋದವಳು’ ಮತ್ತು ‘ಒಡೆಯಲಾರದ ಒಡಪು’ ಅನ್ನು ಕ್ರಮವಾಗಿ ಅಹರ್ನಿಶಿ ಪ್ರಕಾಶನ ಮತ್ತು ಸಂಕಥನ ಪ್ರಕಟಿಸಿದೆ. ಮೂರೂ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.