logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು-ಸಿಂಗಾಪುರ ನೇರ ವಿಮಾನಯಾನ: ಜನವರಿ 21 ರಿಂದಲೇ ಶುರು!

ಕರಾವಳಿ
share whatsappshare facebookshare telegram
12 Dec 2024
post image

ಮಂಗಳೂರು- ಸಿಂಗಾಪುರ ಹೋಗುವ ಕನಸು ಕಾಣುವವರು ತುಂಬಾ ಮಂದಿ, ಅದೂ ಮಂಗಳೂರಿಗರಿಗೆ ತಮ್ಮೂರಿನ ವಿಮಾನ ನಿಲ್ದಾಣದಿಂದಲೇ ಸಿಂಗಾಪುರಕ್ಕೆ ನೇರ ವಿಮಾನ ಸಂಪರ್ಕವಿದ್ದರೆ ಎಷ್ಟು ಒಳ್ಳೇದು ಎನ್ನುವ ನಿರೀಕ್ಷೆ ಜನರಿಗೆ ಇತ್ತು. ಆ ನಿರೀಕ್ಷೆ ಈಗ ಫಲ ಪಡೆದುಕೊಂಡಿದೆ. ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರ ಆರಂಭಿಸಲಿದೆ. ಇದರೊಂದಿಗೆ ಮಂಗಳೂರಿನೊಂದಿಗೆ ವಿಮಾನ ಸಂಪರ್ಕವನ್ನು ಪಡೆಯುವ ಆಗ್ನೇಯ ಏಷ್ಯಾದ ಮೊದಲ ಅಂತರರಾಷ್ಟ್ರೀಯ ತಾಣವಾಗಿ ಸಿಂಗಾಪುರ ಗುರುತಿಸಿಕೊಳ್ಳಲಿದೆ. ಈವರೆಗೆ, ಮಂಗಳೂರಿನಿಂದ ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರ ಕಾರ್ಯಾಚರಿಸುತ್ತಿವೆ.

ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಪ್ರಕಟಣೆ ತಿಳಿಸಿದೆ.

ಸಮಯ ಹೀಗಿದೆ:

ವಿಮಾನ ಸಂಖ್ಯೆ IX 0862 ಮಂಗಳೂರಿನಿಂದ 5.55 ಗಂಟೆಗೆ ಹೊರಟು 13.25 ಗಂಟೆಗೆ ಸಿಂಗಾಪುರ ತಲುಪಲಿದೆ. ವಿಮಾನ ಸಂಖ್ಯೆ IX 0861 ಸಿಂಗಾಪುರದಿಂದ 14.25 ಗಂಟೆಗೆ ಹೊರಟು 16.55 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.

ಮಂಗಳೂರು ದೆಹಲಿ ಮಧ್ಯೆ ಪ್ರತಿ ದಿನ ನೇರ ವಿಮಾನ

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1 ರಿಂದ ಮಂಗಳೂರು ಮತ್ತು ದೆಹಲಿ ನಡುವೆ ಪ್ರತಿ ದಿನ ನೇರ ವಿಮಾನಯಾನ ಸೇವೆ ಒದಗಿಸಲಿದೆ. ವಿಮಾನ ಸಂಖ್ಯೆ IX 1552 ಮಂಗಳೂರಿನಿಂದ 6.40 ಗಂಟೆಗೆ ಹೊರಟು 9.35 ಗಂಟೆಗೆ ದೆಹಲಿಗೆ ತಲುಪಲಿದೆ. ವಿಮಾನ ಸಂಖ್ಯೆ IX 2768 ದೆಹಲಿಯಿಂದ 6.40 ಗಂಟೆಗೆ ಹೊರಟು ಮಂಗಳೂರಿಗೆ 9.35 ಗಂಟೆಗೆ ತಲುಪಲಿದೆ.

ಮಂಗಳೂರು ಪುಣೆ ನೇರ ವಿಮಾನ ವೇಳಾಪಟ್ಟಿ

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 4 ರಿಂದ ಮಂಗಳೂರು ಮತ್ತು ಪುಣೆ ನಡುವೆ ಎರಡು ನೇರ ವಿಮಾನಗಳನ್ನು ನಿರ್ವಹಿಸಲಿದೆ. ವಿಮಾನ ಸಂಖ್ಯೆ IX 2256 ಪುಣೆಯಿಂದ 8 ಗಂಟೆಗೆ ಹೊರಟು 9.25 ಗಂಟೆಗೆ ಪುಣೆಗೆ ತಲುಪುತ್ತದೆ. ವಿಮಾನ ಸಂಖ್ಯೆ 2257 ಪುಣೆಯಿಂದ 9.55 ಗಂಟೆಗೆ ಹೊರಟು 11.40 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ. ವಿಮಾನ ಸಂಖ್ಯೆ 2236 ಮಂಗಳೂರಿನಿಂದ 18.30 ಗಂಟೆಗೆ ಹೊರಟು 20.00 ಗಂಟೆಗೆ ಪುಣೆಗೆ ಮತ್ತು ವಿಮಾನ ಸಂಖ್ಯೆ 2237 ಪುಣೆಯಿಂದ 20.35 ಗಂಟೆಗೆ ಹೊರಟು 22.05 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.