logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣ: ದಿಗಂತ್ ಉಡುಪಿಯಲ್ಲಿ ಪತ್ತೆ

ಟ್ರೆಂಡಿಂಗ್
share whatsappshare facebookshare telegram
8 Mar 2025
post image

ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಬೇಧಿಸುವಲ್ಲಿ ಕೊನೆಗೂ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆಬ್ರವರಿ 25 ರಂದು ನಾಪತ್ತೆಯಾಗಿದ್ದ. ಪೊಲೀಸರು ಹುಡುಕಾಟ, ತನಿಖೆ ತೀವ್ರಗೊಳಿಸಿದ್ದರೂ ಆತನ ಸುಳಿವೇ ದೊರೆತಿರಲಿಲ್ಲ. ಇದೀಗ ದಿಢೀರಾಗಿ ಬಾಲಕ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿಯ ಡಿ ಮಾರ್ಟ್​ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ.

ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್​ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಸಿಕ್ಕಿಬಿದ್ದಿದ್ದಾನೆ. ದಿಗಂತ್ ಚಲನವಲನ ಕಂಡು ಸಂಶಯಗೊಂಡ ಸಿಬ್ಬಂದಿ, ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ, ತಾನು ದಿಗಂತ್ ಎಂದು ಹೇಳಿಕೊಂಡಿದ್ದಾನೆ. ನಂತರ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆತನನ್ನು ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.