logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಂಗಳೂರನ್ನು ವಿಶ್ವದಲ್ಲೇ ಉನ್ನತ ಬಂದರು ಆಗಿ ಪರಿವರ್ತನೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಅಭಯ

ಟ್ರೆಂಡಿಂಗ್
share whatsappshare facebookshare telegram
24 Sept 2021
post image

ಮಂಗಳೂರನ್ನು ವಿಶ್ವದಲ್ಲೇ ಉನ್ನತ ಬಂದರು ಆಗಿ ಪರಿವರ್ತನೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಅಭಯ

ಮಂಗಳೂರು:ಲಾಭದಾಯಕವಾಗಿ ನಡೆಯುತ್ತಿರುವ ನವ ಮಂಗಳೂರು ಬಂದರು ಟ್ರಸ್ಟ್ ಗೆ

ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಪ್ರಪಂಚದಲ್ಲಿಯೇ ಉನ್ನತ ಬಂದರನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರದ ಬಂದರು, ಶಿಪ್ಪಿಂಗ್, ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಹೇಳಿದರು.  ಅವರು ಶುಕ್ರವಾರ ನವಮಂಗಳೂರು ಬಂದರು ಟ್ರಸ್ಟ್ ಬಳಿಯ ವಹಿವಾಟು ಅಭಿವೃದ್ದಿ ಕೇಂದ್ರ (ಬಿಡಿಸಿ)ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.  ನವ ಮಂಗಳೂರು ಬಂದರು ಸ್ಥಾಪನೆಯಾದ ನಂತರ ಹಲವು ಮೈಲಿಗಲ್ಲನ್ನು ಸ್ಥಾಪಿಸಲಾಗಿದೆ. ಲಾಭದಾಯಕವಾಗಿಯೇ ನಡೆಯುತ್ತಿರುವ ಈ ಬಂದರಿನಲ್ಲಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಲು ಕೇಂದ್ರ ಸರಕಾರ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಈ ದಿಸೆಯಲ್ಲಿ 2300 ಕೋಟಿ ರೂ.ಗಳ ವೆಚ್ಚದ ಗ್ಯಾಸ್ ಟರ್ಮಿನಲ್ ನಿರ್ಮಾಣಕ್ಕೆ ಚಿಂತಿಸಲಾಗಿದೆ ಎಂದರು.  ಈ ಬಂದರಿನಿಂದ ರಫ್ತುದಾರರಿಗೆ ಈಗಾಗಲೇ ಸಾಕಷ್ಟು ಅನುಕೂಲವಾಗಿದೆ. ಅದರೊಂದಿಗೆ ದೇಶದ ಆರ್ಥಿಕ ಅಭಿವೃದ್ಧಿಗೂ ಸಹಕಾರ ಆಗಿದೆ, ದೇಶದ ಎಲ್ಲ ಬಂದರುಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಬದ್ಧವಾಗಿದೆ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್‍ಎಂಪಿಟಿಯಲ್ಲಿ ಕೈಗೊಳ್ಳಬೇಕಾದ ಹಲವು ಯೋಜನೆಗಳ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಿದ್ದರು, ಅವುಗಳನ್ನು ಆದ್ಯತೆಯ ಮೇರೆಗೆ ಕಾರ್ಯಗತ ಮಾಡಲಾಗುವುದು ಎಂದು ಹೇಳಿದರು. 

ಆಧುನಿಕ ಭಾರತದ ನಿರ್ಮಾಣದಲ್ಲಿ ಕರ್ನಾಟಕದ ಪಾತ್ರ ಅತಿ ಮಹತ್ವದ್ದಾಗಿದೆ,  ಎಲ್ಲ ರಂಗಗಳಲ್ಲೂ ಮಹತ್ವದ ಕಾರ್ಯಗಳು ಕರ್ನಾಟಕದಿಂದ ಆಗುತ್ತಿವೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವ ಗುರಿ ಹಾಕಿಕೊಂಡಿದ್ದಾರೆ. ಇದಕ್ಕೆ ದೇಶದ ಪ್ರತಿಯೊಬ್ಬರೂ ನಿμÉ್ಠಯಿಂದ ಕೈಜೋಡಿಸುವ ಅಗತ್ಯವಿದೆ. ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವ ಮೂಲಕ ದೇಶ ಭಕ್ತಿಯನ್ನು ಮೆರೆಯಬೇಕಾಗಿದೆ ಎಂದರು. ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಪ್ರೇಮಾನಂದ ಶೆಟ್ಟಿ ವೇದಿಕೆಯಲ್ಲಿದ್ದರು.  ಎನ್‍ಎಂಪಿಟಿ ಅಧ್ಯಕ್ಷ ಡಾ.ಎ.ವಿ. ರಮಣ್ ಸ್ವಾಗತಿಸಿದರು.  ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಎನ್‍ಎಂಪಿಟಿಯ ನೌಕರರು ಹಾಗೂ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. 

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.