



ಹೆಬ್ರಿ : ಮಂಗಳೂರು ವಿಶ್ವವಿದ್ಯಾಲಯವು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿ ದೊಡ್ಡ ಕೊಡುಗೆ ನೀಡಿದೆ, ವಿದ್ಯಾರ್ಥಿಗಳಿಗೂ ವಿಶೇಷ ಪ್ರೋತ್ಸಾಹ ನೀಡುತ್ತಿದೆ, ಕಾಲೇಜುಗಳ ಆಡಳಿತ, ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಸಹಕಾರದಿಂದ ಸಾಧನೆ ಸಾಧ್ಯವಾಗಿದೆ ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ರಿಜಿಸ್ಟಾರ್ ಡಾ.ಕಿಶೋರ್ ಕುಮಾರ್ ಸಿಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಗುರುವಾರ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆರಂಭಗೊಂಡ ೩ ದಿನಗಳ ಮಂಗಳೂರು ವಿವಿ ಮಟ್ಟದ ಉಡುಪಿ ವಲಯ ಮತ್ತು ಅಂತರ್ ವಲಯ ವಾಲಿಬಾಲ್ ಪಂದ್ಯಾಟ ಪಟೇಲ್ ಸೌಕೂರು ಅಂತಯ್ಯ ಶೆಟ್ಟಿ ಮೆಮೋರಿಯಲ್ ಸಿಲ್ವರ್ ರೋಲಿಂಗ್ ಟ್ರೋಫಿಯನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿ ಶೈಕ್ಷಣಿಕ ಸಾಧನೆಯನ್ನು ಮಾಡಿಸುವುದು ನಮ್ಮ ಉದ್ದೇಶ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಇದನ್ನೇ ಪ್ರತಿಪಾದಿಸುತ್ತದೆ, ಆರೋಗ್ಯವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಡಾ.ಕಿಶೋರ್ ಕುಮಾರ್ ಹೇಳಿದರು.
ದೈಹಿಕ ಶಿಕ್ಷಣ ಕ್ಷೇತ್ರಕ್ಕೆ ಅರುಣ್ ಶೆಟ್ಟಿ ಕೊಡುಗೆ ಅದ್ಬುತ : ಬೆಂಗಳೂರು ವಿಶ್ವವಿದ್ಯಾಲಯದ ಅಂದಿನ ಪ್ರತಿಭಾವಂತ ವಿದ್ಯಾರ್ಥಿ ಅರುಣ್ ಶೆಟ್ಟಿ ಅವರು ಹಂತಹಂತವಾಗಿ ಬೆಳೆದು ದೈಹಿಕ ಶಿಕ್ಷಣ ಕ್ಷೇತ್ರಕ್ಕೆ ಅದ್ಬುತ ಕೊಡುಗೆ ನೀಡಿದ್ದಾರೆ. ಅವರೊಬ್ಬ ಕ್ರೀಡೆ ಮತ್ತು ಶೈಕ್ಷಣಿಕ ಕ್ಷೇತ್ರದ ಮರೆಯದ ಮಾಣಿಕ್ಯ ಎಂದು ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದೈಹಿಕ ಶಿಕ್ಷಣ ನಿರ್ದೇಶಕ ಅರುಣ್ ಶೆಟ್ಟಿ ಅವರ ಕಾರ್ಯಸಾಧನೆಗೆ ಮಂಗಳೂರು ವಿಶ್ವ ವಿದ್ಯಾನಿಲಯದ ರಿಜಿಸ್ಟಾರ್ ಡಾ.ಕಿಶೋರ್ ಕುಮಾರ್ ಸಿಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ.ಪ್ರಸಾದ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ ಪಂದ್ಯಾಟದ ಯಶಸ್ವಿಗೆ ಸಹಕೃ ಕೋರಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಜೇಮ್ಸ್ ಒಲಿವೇರ, ಉಡುಪಿ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ಜವಳಿ ವರ್ತಕರ ಸಂಘದ ಅಧ್ಯಕ್ಷ ಯೋಗೀಶ ಭಟ್ ಇದ್ದರು. ಪ್ರಾಧ್ಯಾಪಕ ಡಾ. ಗಣಪತಿ ಎಚ್. ಎ ಸ್ವಾಗತಿಸಿ ೩ ದಿನಗಳಕಾಲ ನಡೆಯುವ ಪಂದ್ಯಾಟದಲ್ಲಿ ೩೨ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು. ವಿಷ್ಣುಮೂರ್ತಿ ಪ್ರಭು ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.