



ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿಯಿರುವ ಹೋಟೆಲ್ ಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದರು. ಯಾವುದೇ ಸೂಚನೆ ಇಲ್ಲದೆ ಮುತ್ತಿಗೆ ನಡೆಸಿರುವುದರಿಂದ ಭದ್ರತಾ ಸಿಬ್ಬಂದಿಗಳು ಸ್ವಲ್ಪ ಹೊತ್ತು ವಿಚಲಿತರಾದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಗಳು ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಗೆ ನುಗ್ಗುವುದನ್ನು ತಡೆದರು. ನಂತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.