logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರಿನಲ್ಲಿ ಕೇಳಿಸಿತು ಗುಂಡಿನ ಸದ್ದು... ತಂದೆ ಮಾಡಿದ ತಪ್ಪಿನಿಂದ ಮಗನಿಗೆ ತಗುಲಿತು ಗುಂಡು. ಕೆಲಸದಾಳು ಬಚಾವ್

ಟ್ರೆಂಡಿಂಗ್
share whatsappshare facebookshare telegram
5 Oct 2021
post image

ಮಂಗಳೂರು : ನಗರದ ಮೋರ್ಗನ್ ಗೇಟ್ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. , ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದರು.ಗಲಾಟೆ ನಡುವೆ ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಮಗ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದು. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ. ನಗರದ ಸ್ಥಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಗುಂಡಿನ ಶಬ್ದ ಕೇಳಿಸುತ್ತಿದ್ದಂತೆ ಸ್ಥಳದಲ್ಲಿ ಸ್ವಲ್ಪ ಬಿಗುವಿನ ವಾತಾವರಣದಿಂದ ನಿರ್ಮಾಣ ವಾಗಿತ್ತು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.