logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ರೈಲಿನಲ್ಲಿ ಕಳೆದು ಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ಪತ್ತೆ

ಕರಾವಳಿ
share whatsappshare facebookshare telegram
1 Mar 2023
post image

ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ನಗರದ ಕುಲಶೇಖರದಲ್ಲಿ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ.

ರವೀಂದ್ರ ಎಂ.ಶೆಟ್ಟಿ ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಅವರು ಮುಂಬೈನಿಂದ ಮಂಗಳೂರಿಗೆ ಫೆ.27ರಂದು ರೈಲಿನಲ್ಲಿ ಬರುತ್ತಿದ್ದಾಗ ಸುರತ್ಕಲ್‌ನಿಂದ ಮಂಗಳೂರು ನಡುವೆ ಅವರ ಟ್ರಾಲಿ ಬ್ಯಾಗ್‌ ಕಳೆದು ಹೋಗಿತ್ತು. ಕಳವಾಗಿರುವ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಗೆ ಮಂಗಳೂರು ರೈಲ್ವೆ ಪೊಲೀಸ್‌ ನಿರೀಕ್ಷಕ ಮೋಹನ್‌ ಕೊಟ್ಟಾರಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ವಿಶೇಷ ತಂಡವು ರೈಲ್ವೆ ಸಿಬಂದಿಯೊಂದಿಗೆ ಟ್ರ್ಯಾಕ್‌ ಪ್ಯಾಟ್ರೋಲಿಂಗ್‌ ನಡೆಸುವಾಗ ಕುಲಶೇಖರ ಸುರಂಗ ಬಳಿ ತಿರುವಿನಲ್ಲಿ ರೈಲು ಹಳಿ ಸಮೀಪ ಟ್ರಾಲಿ ಬ್ಯಾಗ್‌ ಪತ್ತೆಯಾಗಿದೆ.

ಬ್ಯಾಗ್‌ನಲ್ಲಿ 245 ಗ್ರಾಂ ತೂಕದ ವಜ್ರದ ಮತ್ತು ಚಿನ್ನದ ಆಭರಣಗಳು ಸೇರಿದಂತೆ ಅಂದಾಜು ಸುಮಾರು 8,57,500 ರೂ. ಮೌಲ್ಯದ ಸೊತ್ತುಗಳಿದ್ದವು. ತನಿಖೆ ಮುಂದುವರೆಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.