logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಪತ್ನಿ, 4 ವರ್ಷದ ಮಗುವನ್ನು ಹತ್ಯೆಗೈದು ಯುವಕ ಆತ್ಮಹತ್ಯೆಗೆ ಶರಣು..!

ಟ್ರೆಂಡಿಂಗ್
share whatsappshare facebookshare telegram
9 Nov 2024
post image

ಮಂಗಳೂರು: ತನ್ನ ಪತ್ನಿ ಹಾಗೂ 4 ವರ್ಷದ ಮಗುವನ್ನು ಹತ್ಯೆ ಮಾಡಿದ ಯುವಕನೊಬ್ಬ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರ ಹೊರವಲಯದ ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ. ಪಕ್ಷಿಕೆರೆಯ ಜಲಜಾಕ್ಷಿ ರೆಸಿಡೆನ್ಸಿ ನಿವಾಸಿ ಕಾರ್ತಿಕ್ ಭಟ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ಪ್ರಿಯಾಂಕಾ(28) ಹಾಗೂ ಹೃದಯ್(4) ಕೊಲೆಯಾದವರು.

ಯುವಕನ ಛಿದ್ರಗೊಂಡ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಪತ್ನಿ ಮತ್ತು ಮಗು ಹತ್ಯೆಯಾಗಿರುವುದು ತಿಳಿದು ಬಂದಿದೆ. ಕಾರ್ತಿಕ್ ಇವರಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್‌ ಇನ್ಸ್‌ಪೆಕ್ಟ‌ರ್ ವಿದ್ಯಾಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.