logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮೇ 16 ರಿಂದ 19ರ ವರೆಗೆ ಉಡುಪಿಯಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ..!

ಟ್ರೆಂಡಿಂಗ್
share whatsappshare facebookshare telegram
14 May 2024
post image

ಉಡುಪಿ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 16 ರಿಂದ 19 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ ಮುಂತಾದ ತಳಿಗಳ ಒಟ್ಟು 40 ಟನ್‌ನಷ್ಟು ಮಾವು ಮಾರಾಟಕ್ಕೆ ರೈತರು ಆಗಮಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರಿಗೂ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಮಾವು ಬೆಳೆಗಾರರು ಮೇ 15 ರ ಒಳಗಾಗಿ ತಾವು ಬೆಳೆದ ಮಾವಿನ ತಳಿ ಹಾಗೂ ಲಭ್ಯತೆಯ ವಿವರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ ಮೊ.ನಂ: 9141407672 ಕಚೇರಿ ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.