



ಮಣಿಪಾಲ: ಮಣಿಪಾಲದಲ್ಲಿ ಚಪ್ಪಲಿ ಹೊಲಿಯುವ ಕೆಲಸ ಮಾಡಿಕೊಂಡಿದ್ದ ರವಿಕುಮಾರ್ (32) ಎಂಬವರು ವಿಪರೀತ ಶರಾಬು ಕುಡಿಯುವ ಚಟವನ್ನು ಹೊಂದಿದ್ದರು. ಅಂಗಡಿಯಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದ ಇವರು ಆ.07 ರಂದು ಬೆಳಿಗ್ಗೆ ಸುಮಾರು 10:00 ಗಂಟೆಗೆ ಅಂಗಡಿಯಿಂದ ಹೋದವರು ಅಂಗಡಿಗೂ ಬಾರದೇ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಕಪ್ಪು ಮೈಬಣ್ಣ, ಕನ್ನಡ, ಹಿಂದಿ ಹಾಗೂ ತಮಿಳು ಭಾಷೆ ಮಾತಾನಾಡುತ್ತಾರೆ. ಬಿಳಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.