



ಮಣಿಪಾಲ: ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಪ್ಪಳಿಸಿದ ಸ್ಕೂಟರ್ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಉಡುಪಿಯಿಂದ ಡಿಸಿ ಆಫೀಸ್ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಸೂಜುಕಿ ಆಕ್ಸಿಸ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಉರುಳಿದ ಸ್ಕೂಟರ್ ನ ಪೆಟ್ರೋಲ್ ಟ್ಯಾಂಕ್ ಹಾನಿಯಾಗಿ ಸ್ಕೂಟರ್ ಗೆ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಂಡಿದೆ. ನೋಡು ನೋಡುತ್ತಿದ್ದಂತೆ ಸ್ಕೂಟರ್ ಧಗಧಗ ಉರಿದಿದೆ. ತಕ್ಷಣವೇ ಸಮೀಪದ ಮ್ಯಾಕ್ಸ್ ಬಟ್ಟೆ ಮಳಿಗೆಯ ಸಿಬ್ಬಂದಿ ಬೆಂಕಿ ನಂದಿಸುವ ಸಾಧನ ತಂದು ಸ್ಕೂಟರ್ ಗೆ ಹತ್ತಿಕೊಂಡಿದ್ದ ಬೆಂಕಿ ನಂದಿಸಿದರು. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.