logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ಬಿ.ಎ.ಎಂ.ಎಸ್ ಪದವಿಯಲ್ಲಿ ಅನುತ್ತೀರ್ಣ :ಯುವಕ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
16 Sept 2022
post image

ಮಣಿಪಾಲ:

ಬಿ.ಎ.ಎಂ.ಎಸ್. ಪದವಿಯಲ್ಲಿ ಅನುತ್ತೀರ್ಣನಾದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗಬೆಟ್ಟು ಗ್ರಾಮದ ಕಬ್ಯಾಡಿಯಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ. ಕಬ್ಯಾಡಿ ನಿವಾಸಿ 24ವರ್ಷದ ಪೃಥ್ವಿ ಕುಲಕರ್ಣಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಬಿ.ಎ.ಎಂ.ಎಸ್ ಪದವಿಯಲ್ಲಿ ಅನುತ್ತಿರ್ಣನಾಗಿದ್ದರಿಂದ ಸುಮಾರು ಒಂದು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.