logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಿಎ ವಿದ್ಯಾರ್ಥಿನಿ..!

ಟ್ರೆಂಡಿಂಗ್
share whatsappshare facebookshare telegram
7 Jul 2024
post image

ಮಣಿಪಾಲ: ಪರ್ಕಳ ಹೆರ್ಗಾ ಗ್ರಾಮದಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.5ರಂದು ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಎಂದು ಗುರುತಿಸಲಾಗಿದೆ.

ಮಹೇಶ್ ತನಗಿರುವ ಡಯಾಲಿಸ್ ಬಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದಕ್ಕಾಗಿ ಹೆರ್ಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದರು. ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.