



ಉಡುಪಿ: 29 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣ ಭಂಡಾರಿ ಬಂಧಿತ ಆರೋಪಿ. ಈತ 1995 ರಲ್ಲಿ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್ ನಿರೀಕ್ಷಕ ದೇವರಾಜ್ ಟಿ. ವಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ ಸಿ. ಹಾಗೂ ಇಮ್ರಾನ್ ಮಾಹಿತಿಯನ್ನು ಕಲೆಹಾಕಿ ಕುಂದಾಪುರದಿಂದ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.