logo
AADYA ELECTRONICS.jpg
SHARADA TECHERS.jpeg
hindalco everlast.jpeg

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್-2025 ಯಶಸ್ವಿ: ಕ್ವೆಸ್ ಕಾರ್ಪ್ ತಂಡಕ್ಕೆ ಟ್ರೋಫಿ.

ಟ್ರೆಂಡಿಂಗ್
share whatsappshare facebookshare telegram
20 Jan 2025
post image

ಮಣಿಪಾಲ: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ರೋಮಾಂಚನಕಾರಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL 2025) ಯಶಸ್ವಿಯಾಗಿ ಮುಕ್ತಾಯಗೊಳಿಸಿತು.

2025 ರ ಜನವರಿ 17ರಂದು ಪ್ರಾರಂಭವಾದ ಪಂದ್ಯಾವಳಿಯು ಭಾಗವಹಿಸಿದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು. ಅಂತಿಮ ದಿನದಂದು ನಡೆದ ಸಮಾರೋಪ ಸಮಾರಂಭವು ಗಣ್ಯರ ಉಪಸ್ಥಿತಿಯಿಂದ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಆನಂದ್ ವೇಣುಗೋಪಾಲ್, ಸಿ ಓ ಓ ಬೋಧನಾ ಆಸ್ಪತ್ರೆ, ಮಾಹೆ, ಮಣಿಪಾಲ, ಭಾಗವಹಿಸಿದ್ದರು. ಇವರೊಂದಿಗೆ, ಡಾ. ಪದ್ಮರಾಜ್ ಹೆಗ್ಡೆ ಡೀನ್-ಕೆ ಎಂ ಸಿ ಮಣಿಪಾಲ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮತ್ತು ಅದಾನಿ ಪವರ್ ಲಿ ನ ಸ್ಟೇಷನ್ ಹೆಡ್ ಶ್ರೀಧರ್ ಗಣೇಶನ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ.ಅವಿನಾಶ್ ಶೆಟ್ಟಿ ಪಂದ್ಯಾವಳಿಯಲ್ಲಿ ತೋರಿದ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ಅವರು ಮಾತನಾಡುತ್ತಾ ಸಮುದಾಯದ ಸಂಬಂಧ ಗಟ್ಟಿ ಗೊಳಿಸುವಲ್ಲಿ ಹಾಗೂ ಬೆಳೆಸುವಲ್ಲಿ ಮತ್ತು ಬಲವಾದ ಕಾರ್ಪೊರೇಟ್ ನೆಟ್‌ವರ್ಕ್‌ಗಳನ್ನು ನಿರ್ಮಿಸುವಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರವನ್ನು ಒತ್ತಿ ಹೇಳಿದರು.

ಪ್ರತಿಷ್ಠಿತ ಕಸ್ತೂರ್ಬಾ ಹಾಸ್ಪಿಟಲ್ ಕ್ರಿಕೆಟ್ ಲೀಗ್ (KH-CCL 2025) ಟ್ರೋಫಿಯನ್ನು ಕ್ವೆಸ್ ಕಾರ್ಪ್ ಮಣಿಪಾಲದ ತಂಡ ಪಡೆದುಕೊಂಡಿತು. ಅದಾನಿ ಪವೆರ್ ಲಿ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು. ಸಮಾರಂಭದಲ್ಲಿ ವೈಯಕ್ತಿಕ ಪ್ರಶಸ್ತಿಗಳನ್ನು ಸಹ ನೀಡಿ ಗೌರವಿಸಲಾಯಿತು. ಗಣೇಶ್ ಸರಣಿ ಶ್ರೇಷ್ಠ ಗೌರವವನ್ನು ಸ್ವೀಕರಿಸಿದರು.

ಸುಕೇಶ್ ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಗುರುತಿಸಲ್ಪಟ್ಟರು ಮತ್ತು ಜಾಯ್ ಅಸಾಧಾರಣ ಬೌಲಿಂಗ್ ಕೌಶಲ್ಯಕ್ಕಾಗಿ ಪ್ರಶಸ್ತಿಗಳನ್ನು ಪಡೆದರು.

ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್, ಜಿಬು ಥಾಮಸ್ , ಮೋಹನ್ ಶೆಟ್ಟಿ, ಕೃಷ್ಣ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL 2024) ಕಾರ್ಪೊರೇಟ್ ಪ್ರಪಂಚದ ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಿತು. ಮಾತ್ರವಲ್ಲದೆ ಸೌಹಾರ್ದತೆಯನ್ನು ಬೆಳೆಸಲು ಮತ್ತು ಸಮುದಾಯದೊಳಗೆ ಸಂಬಂಧಗಳನ್ನು ಬಲಪಡಿಸಲು ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಭವಿಷ್ಯದಲ್ಲಿ ಈ ಪ್ರದೇಶದಲ್ಲಿ ಆರೋಗ್ಯ ಮತ್ತು ಕ್ರೀಡೆ ಎರಡನ್ನೂ ಉತ್ತೇಜಿಸುವ ಇಂತಹ ಇನ್ನಷ್ಟು ಯಶಸ್ವಿ ಕಾರ್ಯಕ್ರಮಗಳನ್ನು ಎದುರು ನೋಡುತ್ತಿದೆ.

WhatsApp Image 2025-01-13 at 14.53.16 (1).jpeg
25x12.jpg
WhatsApp Image 2024-12-03 at 11.27.39 PM.jpeg
WhatsApp Image 2024-12-03 at 11.27.40 PM.jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
sharada.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.