logo
WhatsApp Image 2026-04-02 at 14.46.04.jpeg
hindalco everlast.jpeg

ಮತ್ತೆ ಭುಗಿಲೆದ್ದ ಮಣಿಪುರ ಹಿಂಸಾಚಾರ: 40 ಭಯೋತ್ಪಾದಕರ ಹತ್ಯೆ

ಟ್ರೆಂಡಿಂಗ್
share whatsappshare facebookshare telegram
29 May 2023
post image

ಮಣಿಪುರ: ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಭಯೋತ್ಪಾದಕರ ಹತ್ಯೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಮಾಹಿತಿ ನೀಡಿದ್ದಾರೆ.

ಭಾನುವಾರ ನಡೆದ ಗಲಭೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಗಲಾಟೆಯಲ್ಲಿ ಈವರೆಗೆ ಕನಿಷ್ಠ 70 ಮಂದಿ ಸಾವನ್ನಪ್ಪಿದ್ದಾರೆ.

ಮಣಿಪುರದ ಸ್ಥಿತಿಗತಿ ಪರಿಶೀಲನೆ ನಡೆಸಲು ಇಂದು ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಹಿಂಸಾಚಾರ ತೀವ್ರತೆಯನ್ನು ತಡೆಯಲು ಸರ್ಕಾರವು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಿದ್ದು, ಇಂಟರ್‌ನೆಟ್‌ ಸಂಪರ್ಕ ಕಡಿತಗೊಳಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.