



ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಆಮ್ ಆದ್ಮಿ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬಂಧನದ ಬೆನ್ನಲ್ಲೇ ಜಾಮೀನಿಗಾಗು ಸುಪ್ರೀಂ ಕೋರ್ಟ್ ಕದ ತಟ್ಟಿದ ಸಿಸೋಡಿಯಾಗೆ ತೀವ್ರ ಹಿನ್ನಡೆಯಾಗಿತ್ತು. ಇದಾದ ಬಳಿಕ ದೆಹಲಿ ಹೈಕೋರ್ಟ್ ಮೊರೆ ಹೋದ ಸಿಸೋಡಿಯಾ ಇದೀಗ ತಿಹಾರ್ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.
ಮನೀಶ್ ಸಿಸೋಡಿಯಾ ಜಾಮೀನು ಅರ್ಜಿಯನ್ನು ಮಾರ್ಚ್ 10 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಹೇಳಿದೆ. ಇತ್ತ ಸಿಬಿಐ, ಮತ್ತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿ ವಿಸ್ತರಿಸುವಂತೆ ಮನವಿ ಮಾಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.