



ಕಾರ್ಕಳ: ಮುಡಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಸುಮಾರು 09 ಜನ ಇಂದು ಸಚಿವ ವಿ ಸುನಿಲ್ ಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾದ ಎಂ. ಸುರೇಶ್ ಕುಮಾರ್, ಗ್ರಾಮ ಪಂಚಾಯತ್‌ಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಪ್ರಮೀಳಾ ಶ್ರೀನಿವಾಸ್, ಕೊರಗ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಮೂಂಡಿ ಕೊರಗ, ಸದಸ್ಯ ಹೆಪೆಜಾರು ಅಶೋಕ್, ಕೊರಗಜ್ಜ ದೈವಸ್ಥಾನ ಸಮಿತಿ ಸದಸ್ಯೆ ಶ್ರೀಮತಿ ಚಿಂದು ಕೊರಗ, ಸಮಾಜ ಸೇವಕಿ ಶ್ರೀಮತಿ ಲೀಸಾ ಮಿರಾಂದ, ಪ್ರೇಮಾ ನಾಯಕ್ ನಡಾಯಿಪಲ್ಕೆ, ಕೊರಗ ಮುಖಂಡ ಬಾಬು ಕೊರಗ, ಪರಪ್ಪಾಡಿ ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಸೀತರಾಮ ಆಚಾರ್ಯ ಮೊದಲಾದವರು ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಜಿಲ್ಲಾಕಾರ್ಯದರ್ಶಿ ರವೀಂದ್ರ ಕುಮಾರ್, ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿ ವಿನಯ ಬಂಗೇರ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಮೃತಾ ಪ್ರಭು, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಪ್ರಮುಖರಾದ ಸುರೇಶ್ ಮಡಿವಾಳ, ಸುರೇಶ್ ಸಾಲ್ಯಾನ್, ಅರುಣ್ ಶೆಟ್ಟಿ, ರಜತ್‌ರಾಮ್‌ಮೋಹನ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.