



ಕಾರ್ಕಳ: ಕಾರ್ಕಳ ಮತ್ತು ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ(ರಿ) ಕಾರ್ಕಳ ಇವರ ಆಶ್ರಯದಲ್ಲಿ ನವಂಬರ್ 5ರಂದು ರವಿವಾರ ಪೂರ್ವಾಹ್ನ ಗಂಟೆ 8.30ರಿಂದ ಕಾರ್ಕಳ ಜೋಡುರಸ್ತೆಯ ಕುಲಾಲ ಭವನದಲ್ಲಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಮಕ್ಕಳ ದಿನಾಚರಣೆ ಪ್ರಯುಕ್ತ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ಉತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ, ಇಬ್ಬರು ಅಸಕ್ತರಿಗೆ ವೈದ್ಯಕೀಯ ನೆರವು ಹಸ್ತಾಂತರ, ನೂತನ ಪದಾಧಿಕಾರಿಗಳ ಪದಗ್ರಹಣ, ಪ್ರಸಾದ ವಿತರಣೆನಡೆಯಲಿದ್ದು,ಸಭಾ ಕಾರ್ಯಕ್ರಮದಲ್ಲಿ, ಗೀತಾ ಸಾಹಿತ್ಯ ಸಂಭ್ರಮ ಖ್ಯಾತಿಯ ಶ್ರೀ ವಿಠಲ ನಾಯಕ್ ಕಲ್ಲಡ್ಕ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪೆನಿಯ ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿ.ಪಿ ನಾಯ್ಕ್ ಮಂಗಳೂರು, ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಉಮೇಶ್ ನಾಯ್ಕ್ ಚೇರ್ಕಾಡಿ, ಮುಂಬೈಯ ಉದ್ಯಮಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಸುಧಾಕರ ನಾಯ್ಕ್ ಕುರ್ಪಾಡಿ, ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಶಂಕರ ನಾಯ್ಕ್ ದುರ್ಗ ಭಾಗವಹಿಸಲಿದ್ದು, ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗ ಶಿಕ್ಷಕ ಶ್ರೀ ಶೇಖರ ಕಡ್ತಲ ವಹಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಾದ ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಮಹಾಬಲ ನಾಯ್ಕ್ ಬೆಳಂಜೆ, ನಾಟಿ ವೈದ್ಯ ಮಹಾಬಲ ನಾಯ್ಕ್ ಶಿವಪುರ, ಶಿಲ್ಪಿ ಸೂರಜ್ ಮಾಳ, ಶಿಕ್ಷಣದಲ್ಲಿ ಸಾಧನೆ ಮಾಡಿದ ಅಕ್ಷತಾ ಎನ್ ಕುಕ್ಕುಜೆ , ಶ್ರಮಜೀವಿ ವೆಂಕಟೇಶ ನಾಯ್ಕ್ ಮಿಯಾರು, ಸಮಗ್ರ ಕೃಷಿ ಸಾಧಕ ಅಶೋಕ್ ನಾಯ್ಕ್ ಬೆಳ್ವಾಯಿ, ಯೋಗ ಸಾಧಕಿ ಅರ್ಚನಾ ನಾಯ್ಕ್ ನಕ್ರೆ, ಬಾಲ ಕಲಾವಿದೆ ಅಪೂರ್ವ ನಾಯ್ಕ್ ಮಾಳರವರಿಗೆ ಗೌರವ ಪ್ರದಾನ ನಡೆಯಲಿದೆ. ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿದ್ದು, ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಸಮಸ್ತ ಮರಾಠಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಇರ್ವತ್ತೂರು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.