



ಕಾರ್ಕಳ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವವು ಮೇ29 ಬುಧವಾರದಂದು ನಡೆಯಲಿದೆ. ಅಂದಿನ ಸಭಾ ಕಾರ್ಯಕ್ರಮ ‘ಜ್ಞಾನಸುಧಾ ಪ್ರತಿಭಾ ಪುರಸ್ಕಾರ’ದಲ್ಲಿ ಎಸ್.ಎಸ್.ಎಲ್.ಸಿ., ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಜ್ಞಾನಸುಧಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ವತಿಯಿಂದ 68.79ಲಕ್ಷ ರೂ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ.
ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು 22 ಡಿಸೆಂಬರ್ 2024ರ ಸಂಸ್ಥಾಪಕರ ದಿನಾಚರಣೆಯಂದು ವಿತರಿಸಲಾಗುವುದು. ಈ ಸಮಾರಂಭದಲ್ಲಿ ಉಡುಪಿಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಯಾಗಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.)ನ ಸಂಸ್ಥಾಪಕರಾದ ನಾಡೋಜ ಡಾ. ಜಿ. ಶಂಕರ್ ರವರು ಭಾಗವಹಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ.ಸುನಿಲ್ ಕುಮಾರ್‍ರವರು ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‍ನ ಆದ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕಳೆದ ಶೈಕ್ಷಣಿಕ ವರ್ಷದಲ್ಲಿಯೂ ಎರಡು ಹಂತದ ವಿದ್ಯಾರ್ಥಿ ವೇತನದಲ್ಲಿ ಒಟ್ಟು ರೂ.1 ಕೋಟಿ 41 ಲಕ್ಷ ವಿದ್ಯಾರ್ಥಿವೇತನ ನೀಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.