logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

2020 ಮತ್ತು 21ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಹಿರಿಯ ಗಾಂಧಿವಾದಿ ಮೀರಾಬಾಯಿ ಕೊಪ್ಪಿಕರ್ ಹಾಗೂ ಸಿದ್ಧಗಂಗಾ ಮಠ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
29 Sept 2021
post image

ಬೆಂಗಳೂರು:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2020 ಮತ್ತು 2021 ನೇ ಸಾಲಿಗೆ ಪ್ರಶಸ್ತಿಗೆ ಹಿರಿಯ ಗಾಂಧಿವಾದಿ ಮೀರಾಬಾಯಿ ಕೊಪ್ಪಿಕರ್ ಹಾಗೂ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ ಆಯ್ಕೆಗೊಂಡಿದೆ. 

ಕೋವಿಡ್- 19ರ ಹಿನ್ನೆಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ, ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವುದರಿಂದ ಸರಕಾರವು

ಪ್ರಶಸ್ತಿಗಳನ್ನು ಪ್ರದಾನ ಮಾಡಲಿದೆ.

ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ 

ಅಶೋಕ್ ಬಂಗಾರೆಪ್ಪ್ಪಾ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಆಯ್ಕೆ ಸಮಿತಿಯು 2020 ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಮೀರಾಬಾಯಿ ಕೊಪ್ಪಿಕರ್

ಮತ್ತು 2021ನೇ ಸಾಲಿಗೆ ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ 5 ಲಕ್ಷ ರೂ. ಹಾಗೂ ಸ್ಮರಣಿಕೆಯನ್ನು  ಒಳಗೊಂಡಿರುತ್ತದೆ.

ಶ್ರೀ ಸಿದ್ದಗಂಗಾ ಮಠ: 'ನಡೆದಾಡುವ ದೇವರು'

ಎಂದೇ ಖ್ಯಾತರಾದ ಡಾ. ಶಿವಕುಮಾರ ಸ್ವಾಮೀಜಿ ಅವರ ಮಹದಾಶಯದಂತೆ ಸತತವಾಗಿ 80 ವರ್ಷಗಳ ಕಾಲ ಅನ್ನದಾಸೋಹ ಹಾಗೂ ಅಕ್ಷರ ದಾಸೋಹದ ತವರಾಗಿ ಜಾತಿ-ಧರ್ಮ ಬೇಧವಿಲ್ಲದೇ, ಪ್ರಾಂತ್ಯ-ಪ್ರದೇಶ ತಾರತಮ್ಯ ಮಾಡದೇ ಲಕ್ಷಾಂತರ ಮಕ್ಕಳಿಗೆ ಅನ್ನ, ಆಶ್ರಯ ಮತ್ತು ವಿದ್ಯೆಯನ್ನು ದಾನ ಮಾಡಿದ, ರಾಷ್ಟ್ರದಲ್ಲೇ ಪ್ರತಿಷ್ಠಿತ ಸಂಸ್ಥೆ ಎಂದು ಹೆಸರಾದ ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ದಗಂಗಾ ಮಠ, ಕ್ಯಾತಸಂದ್ರ, ತುಮಕೂರು, ಸಾಧನೆಗಳ ತವರು.

ಮೀರಾಬಾಯಿ ಕೊಪ್ಪಿಕರ್: ಮೀರಾಬಾಯಿ ಕೊಪ್ಪಿಕರ್ ಹುಬ್ಬಳ್ಳಿಯ ಅತ್ಯಂತ ಶ್ರೀಮಂತರಾಗಿದ್ದ ಕೊಪ್ಪಿಕರ ವಂಶದ ಕುಡಿ.  ಸದ್ಯ ಇವರಿಗೆ 96 ವರ್ಷ. ಸದ್ಯ ಮುಧೋಳದಲ್ಲಿರುವ ವಾತ್ಸಲ್ಯ ಧಾಮದಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ.  ಪಕ್ಕಾ ಗಾಂಧಿವಾದಿಯಾಗಿದ್ದ ಇವರು ಇತ್ತೀಚಿನವರೆಗೂ ತಾವೇ ನೂಲು ನೇಯ್ದು ಅದರಲ್ಲಿ ವಸ್ತ್ರವನ್ನು ಮಾಡಿಕೊಳ್ಳುತ್ತಿದ್ದರು.  ಈಗ ವಯಸ್ಸಾದ ನಿಮಿತ್ತ ನೇಯ್ಗೆ ಮಾಡುತ್ತಿಲ್ಲ.

ಗಾಂಧಿವಾದಿಗಳಾಗಿದ್ದ ಮೀರಾಬಾಯಿ ಕೊಪ್ಪಿಕರ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಸಬರಮತಿ ಆಶ್ರಮದಲ್ಲಿ ಇದ್ದರು. ವಿನೋಬಾ ಭಾವೆಯವರ ಜೊತೆಗೂಡಿ ಭೂದಾನ ಚಳವಳಿಯಲ್ಲಿ ಪಾಲ್ಗೊಂಡು, ಕರ್ನಾಟಕದಿಂದ ಒಟ್ಟು 40 ಸಾವಿರ ಎಕರೆ ಭೂಮಿಯನ್ನು ದಾನ ಮಾಡಿಸುವಲ್ಲಿ ಯಶಸ್ವಿಯಾದವರು.

ಯಾರಿಂದಲೂ ಏನನ್ನೂ ಅಪೇಕ್ಷೆ ಇಲ್ಲ. ಇವರ ಮೂಲ ಧ್ಯೇಯ “ಸಮಾಜಕ್ಕೆ ಏನನ್ನಾದರೂ ಕೊಡಬೇಕು.  ಏನನ್ನೂ ಬಯಸಬಾರದು” ಎಂಬುದು.  ಸಾವಯವ ಕೃಷಿ ಮಾಡುತ್ತಿದ್ದ ಇವರು ತಾವೇ ಬೆಳೆದ ವಸ್ತುಗಳನ್ನು ಮಾರಿ ಅದರಲ್ಲಿ ಬಂದ ಆದಾಯದಿಂದ ಜೀವನ ಮಾಡುತ್ತಿದ್ದಾರೆ.

“ವಾತ್ಸಲ್ಯ ಧಾಮ” ವಿನೋಬಾ ಭಾವೆಯವರ ತಾಯಿ ಮೂಲ ಜಮಖಂಡಿಯವರಾದ ರುಕ್ಮಿಣಿ ಭಾವೆಯವರದ್ದು.  ಮುಧೋದಲ್ಲಿ ಅವರು 2.5 ಎಕರೆ ಜಾಗವನ್ನು ಕೊಂಡು ಅದರಲ್ಲಿ ಆಶ್ರಮ ನಿರ್ಮಿಸಲಾಗಿದೆ.  ಆರಂಭದಲ್ಲಿ 20 ಜನರಿದ್ದರು.  ಈಗ ಮೂರು ಜನರಷ್ಟೇ ವಾಸ ಮಾಡುತ್ತಾರೆ.  ಶ್ರೀಮತಿ ಮೀರಾಬಾಯಿ ಕೊಪ್ಪಿಕರ್ ಅವರನ್ನು ಸಂದರ್ಶಿಸಲು ಅತಿಥಿಗಳು ಆಗಾಗ್ಗೆ ಬರುತ್ತಿರುತ್ತಾರೆ.  ಜಾತ್ಯಾತೀತ ಮನೋಭಾವದವರಾಗಿದ್ದಾರೆ.

2008 ರಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.  ಪ್ರಶಸ್ತಿಯನ್ನು ಇವರಿಗೆ ಕೊಡಲು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಶ್ರಮಕ್ಕೆ ಆಗಮಿಸಿ, ಚೆಕ್ ಹಾಗೂ ಮೂರು ಗ್ರಾಂ ಬಂಗಾರದ ಪದಕವನ್ನು ಕೊಟ್ಟಿದ್ದರು.  ಅವರು ನೀಡಿ ಚೆಕ್ ಹಣ ಇನ್ನೂ ಬ್ಯಾಂಕ್‍ನಲ್ಲಿದ್ದು, ಅದನ್ನು ಜನತೆಯ ಕಲ್ಯಾಣಕ್ಕೆ ಬಳಸಲು ಹೇಳಿದ್ದಾರೆ.  ಬಂಗಾರದ ಪದಕವನ್ನು ಬಡವರಿಗೆ ದಾನ ಮಾಡಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.