



ಉಡುಪಿ: ಜಿಲ್ಲೆಯ ಕೊರಗ ಜನಾಂಗದವರ ಕುಟುಂಬಗಳ ಸಮೀಕ್ಷೆ ನಡೆಸುವ ಕುರಿತಂತೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಅವರು ಸಭೆಯಲ್ಲಿ ಭಾಗವಹಿಸಿ, ಕೊರಗ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ಸಮೀಕ್ಷೆ ನಡೆಸುವ ಬಗ್ಗೆ ಪೂರ್ವ ತಯಾರಿ ಹಾಗೂ ಅನುಷ್ಠಾನದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ,ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ದೂದ್ ಪೀರ್ ಮತ್ತು ಕೊರಗ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.*
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.