



ಬೆಂಗಳೂರು: ಸರಕಾರದ ಇಲಾಖೆಗಳಿಂದ ವಿದ್ಯುತ್ ಬಿಲ್ ಬಾಕಿ ಇದ್ದ ಕಾರಣ ಇಲಾಖೆಗೆ ಆದಾಯವೇ ಇಲ್ಲದಂತಾಗಿದೆ ಅದರಿಂದಾಗಿ ಸರಕಾರಿ ಕಚೇರಿಗಳಿಗೆ ಪ್ರೀಪೆಯ್ಡ್ ಮೀಟರ್ ಅಳವಡಿಕೆ ಚಿಂತನೆ ನಡೆಸಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಮಾತನಾಡಿದ ಸಚಿವರು ಇಂಧನ ವಲಯವನ್ನು ಖಾಸಗಿಕರಣ ಮಾಡುವ ಯಾವುದೇ ಪ್ರಸ್ತಾವ ಅಥವಾ ಚಿಂತನೆ ರಾಜ್ಯ ಸರಕಾರದ ಮುಂದಿಲ್ಲ. ಅಲ್ಲದೆ, ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಮೀಟರ್ ಅಳವಡಿಕೆ ಚಿಂತನೆಯನ್ನೂ ನಾವು ನಡೆಸಿಲ್ಲ’ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.ಇಂಧನ ಇಲಾಖೆಗೆ ಒಟ್ಟು 5,792 ಕೋಟಿ ರೂ.ಗಳಷ್ಟು ದೊಡ್ಡ ಮೊತ್ತದ ಬಾಕಿ ವಿವಿಧ ಇಲಾಖೆಗಳಿಂದ ವಿದ್ಯುತ್ ಬಿಲ್ ಬಾಕಿ ಬರಬೇಕಿದೆ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.