



ಬೆಂಗಳೂರು: ನಾನು ನಿಂತ ನೀರಲ್ಲ. ಬದಲಾಗಿ ಹರಿಯುವ ನೀರು ಎಂದು ಹೇಳುವ ಮೂಲಕ ಸಚಿವ ಸೋಮಣ್ಣ ಅವರು ಪಕ್ಷಾಂತರದ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ ಸೂಕ್ತ ಗೌರವ ದೊರೆಯುತ್ತಿಲ್ಲ ಎಂಬ ಕಾರಣಕ್ಕೆ ಸಚಿವ ಸೋಮಣ್ಣ ಬೇಸರಗೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಚುನಾವಣೆಗೆ ಸಂಬಂಧಿಸಿದ ಎರಡು ಪ್ರಮುಖ ಸಮಿತಿಗಳನ್ನು ರಚಿಸಿದ ಬಿಜೆಪಿ, ಎರಡು ಸಮಿತಿಯಲ್ಲಿ ಕೂಡ ಸೋಮಣ್ಣ ಅವರಿಗೆ ಯಾವುದೇ ಸ್ಥಾನ ಮಾನ ನೀಡಿರಲಿಲ್ಲ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮೈಸೂರು ಮತ್ತು ಚಾಮ ರಾಜನಗರದಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂಬ ಆರೋಪವನ್ನು ಸೋಮಣ್ಣ ಪಕ್ಷದ ವೇದಿಕೆಯಲ್ಲಿ ಮಾಡಿದ್ದರು ಎಂದು ವರದಿಯಾಗಿದೆ.
ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಸೋಮಣ್ಣ ಕಾಂಗ್ರೆಸ್ ಸೇರುವ ಸಾಧ್ಯತೆ ಅಧಿಕವಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.