logo
WhatsApp Image 2026-04-02 at 14.46.04.jpeg
hindalco everlast.jpeg

ನಾಪತ್ತೆಯಾಗಿದ್ದ ದೇವಸ್ಥಾನದ ಅರ್ಚಕ ಶವವಾಗಿ ಪತ್ತೆ

ದೇಶ-ವಿದೇಶ
share whatsappshare facebookshare telegram
8 Mar 2023
post image

ಜೈಪುರ: ರಾಜಸ್ತಾನದಲ್ಲಿ ನಾಪತ್ತೆಯಾಗಿದ್ದ ದೇವಸ್ಥಾನದ ಅರ್ಚಕರೊಬ್ಬರು ಬಾವಿಯಲ್ಲಿ ಸಾವನ್ನಪ್ಪಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಸ್ತಾನದ ದೋಲ್ ಪುರದ ಹನುಮಂತನ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಶೇರ್ ಗಿರಿ(60) ಸೋಮವಾರದಿಂದ ನಾಪತ್ತೆಯಾಗಿದ್ದರು.

ಇದೀಗ ಅವರ ಮೃತದೇಹ ಕಾಜಿಪುರ ಗ್ರಾಮದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ. ಅರ್ಚಕರನ್ನು ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ ಎಂಬ ಶಂಕೆ ಕೂಡ ಮೂಡಿದೆ.

ಸಾದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ. ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.