



ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
2012ರ ಅಕ್ಟೋಬರ್ 9ರಂದು ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಹಲವಾರು ಇಲಾಖೆಗಳಿಂದ ತನಿಖೆ ನಡೆದು ಅನಂತರ ತಮ್ಮ ನೇತೃತ್ವದ ಸರಕಾರ 2013ರಲ್ಲಿ ಈ ಪ್ರಕರಣವನ್ನು ಸಿಬಿಐಗೊಪ್ಪಿಸಿತ್ತು. 2023ರ ವರೆಗೂ ನಡೆದ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷಿಸಲು ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲೂಕಿನ ಜನರದ್ದಾಗಿದೆ.
ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಸೌಜನ್ಯಾ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಕ್ಷೇತ್ರದ ಶಾಸಕನ ಹಾಗೂ ವೈಯಕ್ತಿಕ ನೆಲೆಯಲ್ಲಿ ಆಗ್ರಹಿಸುವುದಾಗಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.