



ಬೆಂಗಳೂರು: ಬಂಧನದ ಭೀತಿ ಎದುರಿಸುತ್ತಿರುವ ಶಾಸಕ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಶಾಸಕರ ಪುತ್ರನ ಮನೆ ಮತ್ತು ಕಚೇರಿಯಲ್ಲಿ ಎಂಟು ಕೋಟಿ ರೂಪಾಯಿ ಪತ್ತೆಯಾದ ಬಳಿಕ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ.
ಕಳೆದ ಆರು ದಿನಗಳಿಂದ ತಲೆ ಮರೆಸಿಕೊಂಡಿದ್ದಾರೆ. ಮನೆಯವರ ಸಂಪರ್ಕಕ್ಕೆ ಕೂಡ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಸೇರಿದಂತೆ ಐವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಗುರಿಪಡಿಸಲು ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಜಾಮೀನು ಅರ್ಜಿ ತಿರಸ್ಕತಗೊಂಡರೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇಂದು ಶರಣಾಗತರಾಗುವ ಸಾಧ್ಯತೆ ಕೂಡ ಇದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.