logo
WhatsApp Image 2026-04-02 at 14.46.04.jpeg
hindalco everlast.jpeg

ಮಹಿಳೆಯರ ವಾಶ್ ರೂಮ್'ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್: ಆರೋಪಿ ಆರೆಸ್ಟ್..!

ಟ್ರೆಂಡಿಂಗ್
share whatsappshare facebookshare telegram
11 Aug 2024
post image

ಬೆಂಗಳೂರು: ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೆಸ್ಟೋರೆಂಟ್‌ ಒಂದರ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪೋನ್‌ ಇಟ್ಟು ಅಸಭ್ಯ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ವಿಕೃತ ಮನಸ್ಸಿನ ಹೊಟೇಲ್‌ ಕೆಲಸಗಾರನೊಬ್ಬನನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮನೋಜ್‌ (23) ಬಂಧಿತ ಆರೋಪಿ. ಈತ ಸದಾಶಿವನಗರ ಠಾಣಾ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಕಾಫಿ ಮಾಡುವ ಕೆಲಸ ಮಾಡಿಕೊಂಡಿದ್ದ. ಇದರ ಜೊತೆಗೆ ಈತನಿಗೆ ಮಹಿಳೆಯರ ಅಸಭ್ಯ ದೃಶ್ಯಗಳನ್ನು ರಹಸ್ಯವಾಗಿ ಸೆರೆ ಹಿಡಿಯುವ ಚಟ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈತ ರೆಸ್ಟೋರೆಂಟ್ನಲ್ಲಿರುವ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್ ಇಟ್ಟು ಮಹಿಳೆಯರ ಅಸಭ್ಯ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಎನ್ನಲಾಗಿದೆ. ಆದರೆ, ಗ್ರಹಚಾರ ಕೈ ಕೊಟ್ಟಿದ್ದರಿಂದ ಇದೀಗ ಆತ ಜೈಲು ಪಾಲಾಗುವಂತಾಗಿದೆ.

ರೆಸ್ಟೋರೆಂಟ್‌ನ ಶೌಚಾಲಯಕ್ಕೆ ತೆರಳಿದ್ದ ಮಹಿಳೆಯೊಬ್ಬರು ಕಸದ ಬುಟ್ಟಿಯಲ್ಲಿಟ್ಟಿದ್ದ ಮೊಬೈಲ್‌ ಫೋನ್ ಕಂಡು ಗಾಬರಿಯಾಗಿ ರೆಸ್ಟೋರೆಂಟ್‌ ಮಾಲೀಕರಿಗೆ ದೂರು ನೀಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಹೋಟೆಲ್‌ ಮಾಲೀಕರು ಸದಾಶಿವನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು ದೂರು ದಾಖಲಿಸಿಕೊಂಡ ಪೊಲೀಸರು ಹೋಟೆಲ್‌ನ ಸಿಸಿ ಕ್ಯಾಮೆರಾ ದೃಶ್ಯಗಳ ಆಧಾರದ ಮೇಲೆ ಮನೋಜ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.