logo
WhatsApp Image 2026-04-02 at 14.46.04.jpeg
hindalco everlast.jpeg

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಡಾಳ್ ವಿರೂಪಾಕ್ಷಪ್ಪ

ದೇಶ-ವಿದೇಶ
share whatsappshare facebookshare telegram
6 Mar 2023
post image

ಬೆಂಗಳೂರು: ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇದೀಗ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ವಿರೂಪಾಕ್ಷಪ್ಪ ಪರ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಲಂಚದ ಹಗರಣ ಬೆಳಕಿಗೆ ಬಂದ ಬಳಿಕ ಶಾಸಕ ವಿರೂಪಾಕ್ಷಪ್ಪ ತಲೆ ಮರೆಸಿಕೊಂಡಿದ್ದಾರೆ. ಕುಟುಂಬದ ಸದಸ್ಯರ ಜತೆ ಸಂಪರ್ಕ ಕೂಡ ಮಾಡಿಲ್ಲ.

ಇದೇ ವೇಳೆ ವಿರೂಪಾಕ್ಷಪ್ಪ ಬಂಧನಕ್ಕೆ ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಈ ಮಧ್ಯೆ ಹಣ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿರೂಪಾಕ್ಷಪ್ಪ ಅವರ ಸೊಸೆಯನ್ನು ಕೂಡ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಮನೆಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಸೊಸೆಯ ಹೇಳಿಕೆ ಪಡೆದಿದ್ದಾರೆ. ಮಾವನ ವ್ಯವಹಾರದ ಬಗ್ಗೆ ತಿಳಿದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.