



ಸೂರತ್(ಗುಜರಾತ್): ‘ಮೋದಿ ಉಪನಾಮ’ ಟೀಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸೂರತ್ ಕೋರ್ಟ್ ವಜಾಗೊಳಿಸಿದೆ.
ಕರ್ನಾಟಕದ ಕೋಲಾರದಲ್ಲಿ 2019ರ ಚುನಾವಣಾ ರ‌್ಯಾಲಿಯಲ್ಲಿ ಮೋದಿ ಉಪನಾಮ ಕುರಿತಂತೆ ಟೀಕಿಸಿದ್ದರು. ಈ ಸಂಬಂಧ ಸೂರತ್‌ನ ಬಿಜೆಪಿ ನಾಯಕರೊಬ್ಬರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಸಿದ್ದರು.
ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಹೀಗಾಗಿ ರಾಹುಲ್ ಈಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.