logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಮೊಹಮ್ಮದ್ ಶಮಿ: ಭಾವುಕ ಸಂದೇಶ ನೀಡಿದ ವೇಗದ ಬೌಲರ್

ಟ್ರೆಂಡಿಂಗ್
share whatsappshare facebookshare telegram
7 Nov 2026
post image

ಮುಂಬೈ: ಭಾರತ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿರುವ ಅವರು, ಕ್ರಿಕೆಟ್ ಬದುಕಿನ ಸವಿನೆನಪುಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಭಾವುಕ ಸಂದೇಶ ನೀಡಿದ್ದಾರೆ.

35 ವರ್ಷದ ಶಮಿ, ಮೊದಲ ಬಾರಿಗೆ ಭಾರತ ತಂಡದ ಟೆಸ್ಟ್ ಜೆರ್ಸಿ ಧರಿಸಿದ ಕ್ಷಣವನ್ನು ಸ್ಮರಿಸಿದ್ದಾರೆ. ದೇಶಕ್ಕಾಗಿ ಏನಾದರೂ ಸಾಧಿಸಬೇಕೆಂಬ ಕನಸಿನೊಂದಿಗೆ ಆರಂಭವಾದ ತಮ್ಮ ಪಯಣದಲ್ಲಿ ಎದುರಾದ ಪ್ರತಿಯೊಂದು ಸವಾಲು, ಗಾಯ, ವಿಕೆಟ್ ಹಾಗೂ ಪುನರಾಗಮನಗಳು ಮಹತ್ವದ ಅನುಭವ ನೀಡಿವೆ ಎಂದು ತಿಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ತಮ್ಮ ಪಾಲಿಗೆ ಕೇವಲ ಆಟದ ಮಾದರಿಯಾಗಿರದೆ, ಬದುಕಿನ ಅತ್ಯಂತ ಅಮೂಲ್ಯ ಅಧ್ಯಾಯವಾಗಿತ್ತು ಎಂದು ಬಣ್ಣಿಸಿರುವ ಅವರು, ಭಾರವಾದ ಮನಸ್ಸಿನಿಂದ ಈ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿರುವುದಾಗಿ ಬರೆದುಕೊಂಡಿದ್ದಾರೆ.

ತಮ್ಮ ಕ್ರಿಕೆಟ್ ಪಯಣದಲ್ಲಿ ಸಹಕಾರ ನೀಡಿದ ಸಹ ಆಟಗಾರರು, ತರಬೇತುದಾರರು, ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಕಷ್ಟದ ಸಮಯದಲ್ಲೂ ತಮ್ಮ ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟ ಅಭಿಮಾನಿಗಳ ಪ್ರೀತಿ ಮರೆಯಲಾಗದು ಎಂದು ಹೇಳಿದ್ದಾರೆ. ಅಲ್ಲದೆ, ಅವಕಾಶ ನೀಡಿದ ಬಿಸಿಸಿಐ ಮತ್ತು ಬಂಗಾಳ ಕ್ರಿಕೆಟ್ ಸಂಸ್ಥೆಗೂ ಕೃತಜ್ಞತೆ ಸಲ್ಲಿಸಿದ್ದಾರೆ.

64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್

ಮೊಹಮ್ಮದ್ ಶಮಿ 2013ರ ನವೆಂಬರ್‌ನಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

ಭಾರತದ ಪರ 64 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಅವರು 27.71ರ ಸರಾಸರಿಯಲ್ಲಿ ಒಟ್ಟು 229 ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆರು ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆದಿರುವುದು ಅವರ ಸಾಧನೆಯಾಗಿದೆ.

ಇಂಗ್ಲೆಂಡ್ ವಿರುದ್ಧ 56 ರನ್ ನೀಡಿ ಆರು ವಿಕೆಟ್ ಪಡೆದಿರುವುದು ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಶ್ರೇಷ್ಠ ಬೌಲಿಂಗ್ ಪ್ರದರ್ಶನವಾಗಿದೆ. ವೇಗ ಮತ್ತು ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ತಂಡಗಳಿಗೆ ಸವಾಲೊಡ್ಡುತ್ತಿದ್ದ ಶಮಿ, ಇದೀಗ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.