logo
WhatsApp Image 2026-04-02 at 14.46.04.jpeg
hindalco everlast.jpeg

ಮೂಡುಬಿದಿರೆ: ಜೈನ್ ಮೆಡಿಕಲ್ ಸೆಂಟರ್ ನಲ್ಲಿ ರಕ್ತದಾನ ಹಾಗೂ ಕೂದಲುದಾನ ಶಿಬಿರ

ಟ್ರೆಂಡಿಂಗ್
share whatsappshare facebookshare telegram
1 Feb 2024
post image

ಮೂಡುಬಿದಿರೆ: ಭಾರತೀಯ ಕಥೋಲಿಕ್ ಯುವ ಸಂಚಾಲನ್ ಮೂಡುಬಿದಿರೆ ಘಟಕ ಇದರ ಸುವರ್ಣ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್, ಜೈನ್ ಮೆಡಿಕಲ್ ಸೆಂಟರ್ ಹಾಗೂ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ 26 ಜನವರಿ 2024 ರಂದು ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ಸವಿನೆನಪಿಗಾಗಿ ರಕ್ತದಾನ ಮತ್ತು ಕೂದಲುದಾನ ಶಿಬಿರವನ್ನು ಜೈನ್ ಮೆಡಿಕಲ್ ಸೆಂಟರ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕೊರ್ಪುಸ್ ಕ್ರಿಸ್ತಿ ಚರ್ಚ್ ಇದರ ಧರ್ಮಗುರುಗಳು ವಂದನೀಯ ಒನಿಲ್ ಡಿಸೋಜ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ರೊ. ರೋಬರ್ಟ್ ರೊನಾಲ್ಡ್ ಫೆರ್ನಾಂಡಿಸ್, ಅಧ್ಯಕ್ಷರು ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್; ಡಾ. ಮಹಾವೀರ ಜೈನ್ ವ್ಯವಸ್ಥಾಪಕ ನಿರ್ದೇಶಕರು ಜೈನ್ ಮೆಡಿಕಲ್ ಸೆಂಟರ್; ಶ್ರೀ ವಿನ್ಸೆಂಟ್ ಮಸ್ಕರೇನಸ್, ಸುವರ್ಣ ಮಹೋತ್ಸವ ಸಮಿತಿಯ ಸಂಚಾಲಕರು; ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ತಂದೆ ಶ್ರೀ ಲಿಯೋ ರೋಡ್ರಿಗಸ್ ಮತ್ತು ಶ್ರೀ ರೂಬನ್ ಸೆರಾವೊ ಅಧ್ಯಕ್ಷರು ಭಾರತೀಯ ಕಥೋಲಿಕ್ ಯುವ ಸಂಚಾಲನ ಮೂಡುಬಿದಿರೆ ಘಟಕ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 62 ದಾನಿಗಳು ರಕ್ತದಾನ ಹಾಗೂ 15 ದಾನಿಗಳು ತಮ್ಮ ಕೂದಲು ದಾನ ಮಾಡಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.