



ಮೂಡಬಿದ್ರೆ: ಮಂಗಳವಾರ ಮೂಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಉಮಾನಾಥ್ ಕೋಟ್ಯಾನ್ ಮೂಲ್ಕಿ ಮೂಡುಬಿದಿರೆಯ ಜನಸೇವೆಗಾಗಿ ಮೂರನೇ ಬಾರಿಗೆ ನಾಮಪತ್ರವನ್ನು ಸಲ್ಲಿಸುತ್ತಿದ್ದು ಈ ಸದಾವಕಾಶ ಮತ್ತು ಸುಯೋಗಕ್ಕೆ ಕಾರಣವಾದ ಭಾರತೀಯ ಜನತಾ ಪಾರ್ಟಿ ಹಾಗೂ ಪಕ್ಷದ ಎಲ್ಲಾ ನಾಯಕರುಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸಾಗರೋಪಾದಿಯಲ್ಲಿ ಆಗಮಿಸಿ ಮೂಡುಬಿದಿರೆಯನ್ನು ಕೇಸರಿಮಯಗೊಳಿಸಿದ ಎಲ್ಲಾ ಕಾರ್ಯಕರ್ತ ಬಂಧುಗಳು, ಜೊತೆಗೆ, ಈ ಸಮಾವೇಶಕ್ಕೆ ಆಗಮಿಸಿದ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಹಾಗೂ ರಾಜಕೀಯ ಗುರು ಕೃಷ್ಣ ಜೆ ಪಾಲೆಮಾರ್, ಜಿಲ್ಲಾಧ್ಯಕ್ಷ ಸುದರ್ಶನ ಎಂ., ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಸೇರಿದಂತೆ ಪಕ್ಷದ ಎಲ್ಲಾ ಹಿರಿಯರಿಗೆ,ಪ್ರಮುಖರಿಗೆ ಹಾಗೂ ಮುಖಂಡರುಗಳಿಗೆ ಹೃದಯಸ್ಪರ್ಶಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
“ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಹೀಗೆ ಇರಲಿ ಎಂದು ಕೋರುತ್ತಾ ತಮಗೆಲ್ಲರಿಗೂ ಸಾದರ ಪ್ರಣಾಮಗಳನ್ನು ಸಲ್ಲಿಸುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.