



ಮಂಗಳೂರು:
ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ.
ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದು, ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.