


ಬೆಂಗಳೂರು:** ಕರ್ನಾಟಕ ಶಾಸ್ತ್ರೀಯ ಸಂಗೀತದ ದಿಗ್ಗಜ, ‘ಭಾರತರತ್ನ’ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಪ್ಯಾನ್ ಇಂಡಿಯಾ ಬಯೋಪಿಕ್ ಚಿತ್ರಕ್ಕೆ ಕೊನೆಗೂ ನಾಯಕಿ ಅಂತಿಮಗೊಂಡಿದ್ದಾರೆ. ಹಲವು ಸ್ಟಾರ್ ನಟಿಯರ ಹೆಸರುಗಳು ಕೇಳಿಬಂದಿದ್ದರೂ, ಇದೀಗ ಈ ಐತಿಹಾಸಿಕ ಪಾತ್ರವನ್ನು ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ನಿರ್ವಹಿಸುವುದು ಖಚಿತವಾಗಿದೆ.
ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರಕ್ಕಾಗಿ ಸಾಯಿ ಪಲ್ಲವಿ, ರುಕ್ಮಿಣಿ ವಸಂತ್, ಮೃಣಾಲ್ ಠಾಕೂರ್ ಸೇರಿದಂತೆ ಹಲವು ನಟಿಯರ ಲುಕ್ ಟೆಸ್ಟ್ ನಡೆಸಲಾಗಿತ್ತು. ಆದರೆ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿರುವ ರಶ್ಮಿಕಾ, ತಾವೇ ಸುಬ್ಬುಲಕ್ಷ್ಮಿ ಅವರ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ಘೋಷಿಸಿದ್ದಾರೆ.
ಸುಬ್ಬುಲಕ್ಷ್ಮಿ ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ‘ಜರ್ಸಿ’ ಖ್ಯಾತಿಯ ನಿರ್ದೇಶಕ ಗೌತಮ್ ತಿನ್ನನೂರಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಚಿತ್ರದ ಘೋಷಣೆಯ ಬೆನ್ನಲ್ಲೇ ರಶ್ಮಿಕಾ ಅವರು ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಗೆಟಪ್‌ನಲ್ಲಿರುವ ತಮ್ಮ ಲುಕ್ ಪೋಸ್ಟರ್ ಅನ್ನು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
‘ಪುಷ್ಪ’, ‘ಅನಿಮಲ್’ ಸೇರಿದಂತೆ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ರಶ್ಮಿಕಾ, ಇದೀಗ ಭಾರತೀಯ ಸಂಗೀತ ಲೋಕದ ದಿಗ್ಗಜೆಯ ಜೀವನವನ್ನು ತೆರೆಯ ಮೇಲೆ ಹೇಗೆ ಕಟ್ಟಿಕೊಡಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.