logo
WhatsApp Image 2026-04-02 at 14.46.04.jpeg
hindalco everlast.jpeg

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡೇಟಿಗೆ ಬಲಿ: ಶೂಟೌಟ್ ಮಾಡಿ ಪರಾರಿಯಾದ ದುಷ್ಕರ್ಮಿಗಳು

ಟ್ರೆಂಡಿಂಗ್
share whatsappshare facebookshare telegram
7 Aug 2026
post image

ಉಡುಪಿ; ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಶೂಟೌಟ್‌ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವೈಯಕ್ತಿಕ ದ್ವೇಷ ಅಥವಾ ಇತರ ಕಾರಣಗಳ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.