logo
WhatsApp Image 2026-04-02 at 14.46.04.jpeg
hindalco everlast.jpeg

ನಚಿಕೇತ ವಿದ್ಯಾಲಯದಲ್ಲಿ ಮುದ್ದು ಕೃಷ್ಣ–ಮುದ್ದು ರಾಧೆ ಸ್ಪರ್ಧೆ

ಟ್ರೆಂಡಿಂಗ್
share whatsappshare facebookshare telegram
16 Sept 2026
post image

ಕಾರ್ಕಳ:** ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ, ಜನ್ಮಭೂಮಿ ಸೇವಾ ಟ್ರಸ್ಟ್ ಬೈಲೂರು ಇದರ ಅಂಗಸಂಸ್ಥೆಯಾದ ನಚಿಕೇತ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿ ಮಕ್ಕಳಿಗೆ ‘ಮುದ್ದು ಕೃಷ್ಣ–ಮುದ್ದು ರಾಧೆ’ ಸ್ಪರ್ಧೆ ಆಯೋಜಿಸಲಾಯಿತು.

ವಿದ್ಯಾಲಯದ ಪುಟಾಣಿ ಮಕ್ಕಳು ಹಾಗೂ ಶಿಕ್ಷಕ ವೃಂದದವರು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಬಳಿಕ ನಡೆದ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ನಚಿಕೇತ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ನಾಯಕ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಾಜಿ ರೋಟರಿ ಜಿಲ್ಲಾ ಗವರ್ನರ್ ರೊ. ಡಾ. ಭರತೇಶ ಆದಿರಾಜ್, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷ ರೊ. ಮಂಜುನಾಥ ಹೆಗ್ಡೆ ಹಾಗೂ ಮುಖ್ಯೋಪಾಧ್ಯಾಯಿನಿ ಮಾತಾಜಿ ಚಂದ್ರಿಕಾ ದಿವಾಕರ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ರೊ. ಚಿರಾಗ್ ರಾವ್, ರೊ. ಬಾಲಕೃಷ್ಣ ನಾಯಕ್, ಶ್ರೀ ಮಂಜುನಾಥ್, ಕೋಶಾಧಿಕಾರಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ–ರಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ, ಮಾತೃ ಮಂಡಳಿ ಅಧ್ಯಕ್ಷೆ ಪ್ರಮೋದ ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.