



ಹೆಬ್ರಿ : ಮುದ್ರಾಡಿ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ದೇವಸ್ಥಾನದ ನವೀಕೃತ ಶಿಲಾಮಯ ದೇಗುಲದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನವಚಂಡಿಕಾ ಹೋಮ, ಹಸಿರು ಹೊರೆ ಕಾಣಿಕೆ ಸಮರ್ಪಣೆ, ಮೆರವಣಿಗೆ ಸಹಿತ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಮಾಲೋಚನಾ ಸಭೆಯು ಭಾನುವಾರ ಕ್ಷೇತ್ರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನವಚಂಡಿಕಾ ಹೋಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಜಗೋಳಿ ರವೀಂದ್ರ ಶೆಟ್ಟಿ ಬಿಡುಗಡೆಗೊಳಿಸಿ ಮಾತನಾಡಿ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು. ದೇವಸ್ಥಾನದ ಆಡಳಿತ ಮೋಕ್ತೇಸರ ಸುಕುಮಾರ ಮೋಹನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಗಣಪತಿ ಎಂ, ಸಹ ಕಾರ್ಯದರ್ಶಿ ನವೀನ್ ಕೋಟ್ಯಾನ್, ಕೋಶಾಧಿಕಾರಿ ರಮೇಶ್ ಪೂಜಾರಿ ಶಿವಪುರ, ಪ್ರಮುಖರಾದ ಜ್ಯೋತಿ ಹರೀಶ ಪೂಜಾರಿ, ವರಂಗ ವಿಠ್ಠಲ ಪೂಜಾರಿ, ಹೆಬ್ರಿ ಟಿ.ಜಿ.ಆಚಾರ್, ಪ್ರಮಲ್ ಕುಮಾರ್ ಕಾರ್ಕಳ, ಶಶಿಕಲಾ ಡಿ.ಪೂಜಾರಿ, ಧರ್ಮಸ್ಥಳ ಯೋಜನೆಯ ಮೇಲ್ವೀಚಾರಕ ಮಧು ಹೆಚ್.ಆರ್, ಶುಭದರ ಶೆಟ್ಟಿ, ಸುಧೀಂದ್ರ ಮೋಹನ್, ಸುರೇಂದ್ರ ಮೋಹನ್, ಧರ್ಮಸ್ಥಳ ಯೋಜನೆಯ ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು,ವಿವಿಧ ಸಮಿತಿಯ ಪ್ರಮುಖರು ಭಾಗವಹಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.