



ಮುದ್ರಾಡಿ : ವಿಜ್ಞಾನದಿಂದ ಅಜ್ಞಾನವನ್ನು ಹೋಗಲಾಡಿಸಬಹುದು ಯಾವುದೇ ಕೆಲಸ ಕಾರ್ಯವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಮನಸ್ಸನ್ನು ಅರಳಿಸಿಕೊಂಡು ಮುನ್ನಡೆದರೆ ಯಶಸ್ಸನ್ನು ಸಾಧಿಸಬಹುದು ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.
ಅವರು ಸೋಮವಾರ ಮುದ್ರಾಡಿಯ ಎಂ. ಎನ್. ಡಿ. ಡಿ. ಎಸ್ ಎಂ ಅನುದಾನಿತ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದ ಹೆಬ್ರಿ ತಾಲೂಕು ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುದ್ರಾಡಿ ಪಂಚಾಯತ್ ಅಧ್ಯಕ್ಷ ಮಂಜುನಾಥ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ, ಎಸ್ಡಿಎಂಸಿ ಅಧ್ಯಕ್ಷೆ ಸುಮಿತ್ರ, ಕ್ವಿಜ್ ಮಾಸ್ಟರ್ ಕೃಷ್ಣಮೂರ್ತಿ, ಪಿಡಿಒ ಸದಾಶಿವ ಸೇರ್ವೆಗಾರ್, ಗ್ರಾಪಂ ಸದಸ್ಯ ಸನತ್ ಕುಮಾರ್ ಹಾಗೂ ಮುಖ್ಯಶಿಕ್ಷಕಿ ಇಂದಿರಾ ಬಾಯರಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.