



ಮೂಡುಬಿದಿರೆ: ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಶುಕ್ರವಾರದಿಂದ ಕಾಣೆಯಾಗಿದ್ದಾಳೆ.
ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ನಾಪತ್ತೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು, ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿದ್ದಾಳೆ.
ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.