



ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ. 2013 ರ ಬ್ಯಾಚ್ ನಲ್ಲಿ ಐಎಎಸ್ ಅಧಿಕಾರಿಯಾಗಿದ್ದಾರೆ
ಅದೇ ರೀತಿ ದ.ಕ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.