



ಮಲ್ಪೆ: ಸಮುದ್ರದಲ್ಲಿ ಈಜಲು ಹೋಗಿ ಅಲೆಯ ಅಬ್ಬರಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಪ್ರವಾಸಿಗರನ್ನು ಲೈಫ್ ಗಾರ್ಡ್ಸ್ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್‌ನಲ್ಲಿ ಗುರುವಾರ ನಡೆದಿದೆ. ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19), ಅನಿಲ್ ಕುಮಾರ್ (21) ಹಾಗೂ ಮಂಡ್ಯ ಜಿಲ್ಲೆಯ ನೆರೆಕೆರೆಯ ನಿತಿನ್ (18) ರಕ್ಷಿಸಲಿಟ್ಟಿದ್ದಾರೆ. ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿರುತ್ತದೆ. ಹೆಚ್ಚು ಆಳಕ್ಕೆ ಇಳಿಯದಂತೆ ಲೈಫ್‌ಗಾರ್ಡ್ಸ್ ಸೂಚನೆ ನೀಡಿದರೂ ನಿರ್ಲಕ್ಷ್ಯದಿಂದ ಪ್ರವಾಸಿಗರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಇದೇ ರೀತಿ ಸಮುದ್ರದಲ್ಲಿ ಮುಳುಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.